Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಅವನಿಗೆ - ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ ಎಂದು ಹೇಳಿದನು. ಹಿಡಿದಾಗ ಅದು ಕೋಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಅವನಿಗೆ, “ಕೈಚಾಚಿ ಅದರ ಬಾಲವನ್ನು ಹಿಡಿ,” ಎಂದರು. ಅಂತೆಯೇ ಹಿಡಿದಾಗ ಅದು ಕೋಲು ಆಯಿತು. ಆಗ ಸರ್ವೇಶ್ವರ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿದುಕೊ” ಎಂದು ಹೇಳಿದನು. ಮೋಶೆಯು ಕೈಚಾಚಿ ಹಾವಿನ ಬಾಲವನ್ನು ಹಿಡಿದನು. ಆಗ ಹಾವು ಕೋಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಮೋಶೆಗೆ, “ನಿನ್ನ ಕೈಚಾಚಿ, ಅದರ ಬಾಲವನ್ನು ಹಿಡಿ,” ಎಂದಾಗ, ಅವನು ಕೈಚಾಚಿ ಅದನ್ನು ಹಿಡಿದ ಕೂಡಲೇ, ಅದು ಅವನ ಕೈಯಲ್ಲಿ ಕೋಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:4
9 ತಿಳಿವುಗಳ ಹೋಲಿಕೆ  

ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.


ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.


ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.


ಯೆಹೋವನು ಅವನಿಗೆ - ಅದನ್ನು ನೆಲದಲ್ಲಿ ಬೀಸಾಡು ಎಂದು ಹೇಳಿದನು. ನೆಲದಲ್ಲಿ ಬೀಸಾಡುತ್ತಲೇ ಅದು ಹಾವಾಯಿತು; ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.


ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.


ಎಲೀಷನು ಅದನ್ನು ತೆಗೆದುಕೋ ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು