Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:7
6 ತಿಳಿವುಗಳ ಹೋಲಿಕೆ  

ಅವನು ಯೊರ್ದನಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಣುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಒಂದು ಹಳ್ಳಿಗೆ ಬಂದಾಗ ಹತ್ತು ಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು -


ಆಗ ಯೆಹೋವನು ಅವನಿಗೆ - ಅವರು ನಿನ್ನನ್ನು ನಂಬದೆ ಮೊದಲನೆಯ ಮಹತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು