Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:2 - ಕನ್ನಡ ಸತ್ಯವೇದವು J.V. (BSI)

2 ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:2
21 ತಿಳಿವುಗಳ ಹೋಲಿಕೆ  

ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.


ಚೈತ್ರ ಮಾಸದ ಈ ದಿನದಲ್ಲೇ ಹೊರಡುವವರಾಗಿದ್ದೀರಷ್ಟೆ.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. -


ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.


ಒಂದೇ ಡೇರೆಯಾಗುವಂತೆ ಸಮಸ್ತವನ್ನು ಕೂಡಿಸುವದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.


ಅವರು ಮಾಡಬೇಕಾದವುಗಳು ಯಾವವಂದರೆ - ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು,


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ, ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿಪರಿಶುದ್ಧವಾದದ್ದೆಂದು ನೀವು ತಿಳುಕೊಳ್ಳಬೇಕು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.


ಈ ಗುಡಾರದ ಮೇಲೆ ಹೊದಿಸುವದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳನ್ನು ಮಾಡಿಸಬೇಕು.


[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.


ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟುಬಂದ ಎರಡನೆಯ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಅರಣ್ಯದಲ್ಲಿ


ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು.


ನಾನು ಇಸ್ರಾಯೇಲ್ಯರನ್ನು [ಐಗುಪ್ತ ದೇಶದಿಂದ] ಬರ ಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ; ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.


ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು