Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:21 - ಕನ್ನಡ ಸತ್ಯವೇದವು J.V. (BSI)

21 ಅದರ ಮೇಲೆ ಕೃಪಾಸನವನ್ನಿಟ್ಟು ಮಂಜೂಷವನ್ನು ಗುಡಾರದೊಳಕ್ಕೆ ತಂದು ಅದರ ಮುಂದೆ ತೆರೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:21
5 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡಬೇಕು.


ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು, ಆ ತೆರೆಯು ಪವಿತ್ರಸ್ಥಾನವೆಂಬದನ್ನೂ ಮಹಾಪವಿತ್ರಸ್ಥಾನವೆಂಬದನ್ನೂ ಬೇರೆ ಬೇರೆ ಮಾಡುವದು .


ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕೋಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ,


ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು