Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:34 - ಕನ್ನಡ ಸತ್ಯವೇದವು J.V. (BSI)

34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:34
28 ತಿಳಿವುಗಳ ಹೋಲಿಕೆ  

ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.


ಯೆಹೋವನ ತೇಜಸ್ಸು ಆತನ ಆಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


ಅಲ್ಲಿಯೇ ನಾನು ಇಸ್ರಾಯೇಲ್ಯರಿಗೆ ದರ್ಶನವನ್ನು ಕೊಡುವೆನು; ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವದು.


ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.


ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.


ಮೋಶೆ ಆ ಡೇರೆಯೊಳಕ್ಕೆ ಹೋದ ಕೂಡಲೆ ಮೇಘಸ್ತಂಭವು ಇಳಿದು ಆ ಡೇರೆಯ ಬಾಗಲಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವನು ಮೋಶೆಯ ಸಂಗಡ ಮಾತಾಡುವನು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು.


[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ನಾನು ಅವರ ಮಧ್ಯದಲ್ಲಿ ವಾಸಿಸುವದಕ್ಕೆ ನನಗೆ ಒಂದು ದೇವಸ್ಥಾನವನ್ನು ಕಟ್ಟಿಸಬೇಕು.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ನಾನು ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ [ಅವರೊಡನೆ] ಸಂಚರಿಸಿದೆನು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.


ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವಸ್ಥಾನವು ನನಗೆ ಇಷ್ಟ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು