Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:35 - ಕನ್ನಡ ಸತ್ಯವೇದವು J.V. (BSI)

35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವದರಿಂದಲೂ ಯೆಹೋವನ ತೇಜಸ್ಸು ಗುಡಾರದೊಳಗೆ ತುಂಬಿರುವದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:35
15 ತಿಳಿವುಗಳ ಹೋಲಿಕೆ  

ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.


ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು.


ಯೆಹೋವನ ತೇಜಸ್ಸು ಆತನ ಆಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.


ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.


ಮೋಶೆ ಯೆಹೋವನ ಸಂಗಡ ಮಾತಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ಯಾಜಕರು ಪರಿಶುದ್ಧಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.


ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಅಲ್ಲಿಯೇ ನಾನು ಇಸ್ರಾಯೇಲ್ಯರಿಗೆ ದರ್ಶನವನ್ನು ಕೊಡುವೆನು; ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವದು.


ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು.


ಚೀಯೋನ್ ಪರ್ವತದ ಸಂಪೂರ್ಣ ಮಂದಿರದ ಮೇಲೆಯೂ ಅಲ್ಲಿನ ಕೂಟಗಳ ಮೇಲೆಯೂ ಹಗಲಲ್ಲಿ ಧೂಮಮೇಘವನ್ನು, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನು, ಉಂಟು ಮಾಡುವನು. [ಈ] ಪ್ರಭಾವದ ಮೇಲೆಲ್ಲಾ ಆವರಣವಿರುವದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆಗ ಯೆಹೋವನ ತೇಜಸ್ಸು ಮೂಡಣ ಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು