Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:7 - ಕನ್ನಡ ಸತ್ಯವೇದವು J.V. (BSI)

7 ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಗಂಗಾಳವನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರು ತೊಟ್ಟಿಯನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇರಿಸು. ಗಂಗಾಳದಲ್ಲಿ ನೀರನ್ನು ಹಾಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:7
11 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಯೆಹೋವನೇ, ನಾನು ನಿಷ್ಕಳಂಕನೆಂದು ಕೈಗಳನ್ನು ತೊಳೆದುಕೊಂಡವನಾಗಿ


ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.


ದೇವದರ್ಶನದ ಗುಡಾರದ ಬಾಗಲಿನ ಮುಂದುಗಡೆಯಲ್ಲಿ ಯಜ್ಞವೇದಿಯನ್ನು ಇಡಬೇಕು.


ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಲಿಗೆ ಪರದೆಯನ್ನು ತೂಗಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು