Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:1 - ಕನ್ನಡ ಸತ್ಯವೇದವು J.V. (BSI)

1 ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:1
26 ತಿಳಿವುಗಳ ಹೋಲಿಕೆ  

ಮೋಶೆ ಅವನಿಗೆ - ನಾವು ಯೆಹೋವನಿಗೆ ಜಾತ್ರೆಯನ್ನು ನಡಿಸಬೇಕಾಗಿದೆ; ಆದಕಾರಣ ಹುಡುಗರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡು ಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ ಎಂದು ಉತ್ತರ ಕೊಟ್ಟನು.


ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಗೆ ಹೋಗಿ ಅವನಿಗೆ - ಇಸ್ರಾಯೇಲ್ಯರು ನಿನ್ನ ದೇಶದಿಂದ ಹೊರಟು ಹೋಗುವಂತೆ ಅಪ್ಪಣೆಕೊಡಬೇಕೆಂದು ಹೇಳು ಅಂದನು.


ಇಸ್ರಾಯೆಲ್ಯರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತಾಡಿದಂಥ ಮೋಶೆ ಆರೋನರು ಇವರೇ.


ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ನೀನು ಫರೋಹನ ಬಳಿಗೆ ಹೋಗಿ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.


ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲ್ಯರು ದೇಶದಿಂದ ಹೊರಟುಹೋಗುವದಕ್ಕೆ ಅಪ್ಪಣೆಕೊಡಬೇಕೆಂಬದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತಾಡಬೇಕು.


ತರುವಾಯ ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೋಲನ್ನು ಚಾಚಿ ಭೂವಿುಯ ಧೂಳನ್ನು ಹೊಡೆ; ಹೊಡೆಯಲು ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವದು ಎಂದು ಹೇಳು ಅಂದನು.


ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು.


ನಾವು ಅರಣ್ಯದಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು ಅಂದನು.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬದಾಗಿ ಹೇಳಿದ್ದಾನಷ್ಟೆ.


ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು