Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:10 - ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಬಿಟ್ಟೀಮಾಡಿಸುವ ಅಧಿಕಾರಿಗಳೂ ಮೇಸ್ತ್ರಿಗಳೂ ಆ ಜನರಿಗೆ - ನಿಮಗೆ ಹುಲ್ಲನ್ನು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:10
7 ತಿಳಿವುಗಳ ಹೋಲಿಕೆ  

ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆ ದಿನದಲ್ಲಿ ಫರೋಹನು ಬಿಟ್ಟೀ ಮಾಡಿಸುವ ಅಧಿಕಾರಿಗಳಿಗೂ ಮೇಸ್ತ್ರಿಗಳಿಗೂ -


ನೀವು ಅವರಿಂದ ಕಷ್ಟವಾದ ಬಿಟ್ಟೀಕೆಲಸವನ್ನು ಮಾಡಿಸಬೇಕು. ಅವರಿಗೆ ಕಷ್ಟವಾದ ಕೆಲಸವಿದ್ದರೆ ಸುಳ್ಳು ಮಾತುಗಳಿಗೆ ಲಕ್ಷ್ಯ ಕೊಡುವದಕ್ಕೆ ಮಾರ್ಗವಿಲ್ಲ ಎಂದು ಆಜ್ಞೆ ಮಾಡಿದನು.


ನೀವೇ ಹೋಗಿ ಎಲ್ಲಿಂದಾದರೂ ತಂದುಕೊಳ್ಳಬೇಕು; ಆದರೂ ನೀವು ಮಾಡಬೇಕಾದ ಕೆಲಸ ಸ್ವಲ್ಪವೂ ಕಡಿಮೆಯಾಗಕೂಡದು ಎಂದು ಹೇಳಿದರು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು