ವಿಮೋಚನಕಾಂಡ 5:21 - ಕನ್ನಡ ಸತ್ಯವೇದವು J.V. (BSI)21 ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು. ಅಧ್ಯಾಯವನ್ನು ನೋಡಿ |