Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:1 - ಕನ್ನಡ ಸತ್ಯವೇದವು J.V. (BSI)

1 ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:1
27 ತಿಳಿವುಗಳ ಹೋಲಿಕೆ  

ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.


ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿದ್ದಿಲ್ಲ, ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಿಪಡಿಸಿಕೊಂಡಿರಲಿಲ್ಲ.


ಫರೋಹನು ಆ ರಾತ್ರಿಯಲ್ಲೇ ಮೋಶೆ ಆರೋನರನ್ನು ಕರಿಸಿ - ನೀವೂ ಇಸ್ರಾಯೇಲ್ಯರೆಲ್ಲರೂ ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ; ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸಿರಿ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಯೆಹೋವನು ಮೋಶೆಗೆ ಇಂತೆಂದನು - ಫರೋಹನಿಗೂ ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ; ಅದು ಬಂದ ನಂತರ ಅವನು ನಿಮಗೆ ಇಲ್ಲಿಂದ ಹೋಗುವದಕ್ಕೆ ಅಪ್ಪಣೆಕೊಡುವದು ಮಾತ್ರವಲ್ಲದೆ ನಿಮ್ಮೆಲ್ಲರನ್ನು ಅಟ್ಟಿಬಿಡುವನು.


ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ


ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.


ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅಂದದರಿಂದ ದೇವರ ಮನುಷ್ಯನು ಅವನಿಗೆ - ನೀನು ಅದನ್ನು ಕಣ್ಣಾರೆ ಕಾಣುವಿ; ಆದರೆ ಅನುಭವಿಸುವದಿಲ್ಲ ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಭಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡು ನಮ್ಮ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿದನು.


ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.


ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಯೆಹೋವನು ಅವನಿಗೆ - ಯೆಹೋವನ ಕೈ ಮೋಟುಗೈಯೋ; ನನ್ನ ಮಾತು ನೆರವೇರುತ್ತದೋ ಇಲ್ಲವೋ ಈಗ ನೀನು ನೋಡುವಿ ಎಂದು ಹೇಳಿದನು.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು