Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:11 - ಕನ್ನಡ ಸತ್ಯವೇದವು J.V. (BSI)

11 ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಗೆ ಹೋಗಿ ಅವನಿಗೆ - ಇಸ್ರಾಯೇಲ್ಯರು ನಿನ್ನ ದೇಶದಿಂದ ಹೊರಟು ಹೋಗುವಂತೆ ಅಪ್ಪಣೆಕೊಡಬೇಕೆಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನೀನು ಈಜಿಪ್ಟಿನವರ ಅರಸ ಫರೋಹನ ಬಳಿಗೆ ಹೋಗು. ಅವನಿಗೆ, ‘ಇಸ್ರಯೇಲರು ನಿನ್ನ ದೇಶದಿಂದ ಹೊರಟು ಹೋಗುವುದಕ್ಕೆ ಅಪ್ಪಣೆಕೊಡಬೇಕು’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:11
8 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ ಇಂತೆಂದನು - ನಿನ್ನನ್ನು ಫರೋಹನಿಗೆ ದೇವರ ಸ್ಥಾನದಲ್ಲಿ ನೇವಿುಸಿದ್ದೇನೆ, ನೋಡು.


ನಾನು ಯೆಹೋವನು; ನಾನು ನಿನಗೆ ಹೇಳುವದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಯಲ್ಲಿ ಹೇಳಬೇಕೆಂದು ಹೇಳಲಾಗಿ


ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಾನಲ್ಲಾ; ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲೇ ಇಲ್ಲ ಅಂದನು.


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ಆದದರಿಂದ ನನ್ನ ಜನರಾಗಿರುವ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಹೊರಗೆ ಬರ ಮಾಡುವದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ ಬಾ ಅಂದನು.


ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ಆಗ ಯೆಹೋವನು ಮೋಶೆಯ ಸಂಗಡ ಮಾತಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು