Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:14 - ಕನ್ನಡ ಸತ್ಯವೇದವು J.V. (BSI)

14 ಅವರ ಗೋತ್ರಗಳ ಪ್ರಧಾನ ಪುರುಷರು. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನಿಗೆ ಹನೋಕ್ ಫಲ್ಲು ಹೆಚ್ರೋನ್ ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:14
17 ತಿಳಿವುಗಳ ಹೋಲಿಕೆ  

ರೂಬೇನನ ಮಕ್ಕಳಾದ ಹನೋಕ್ ಫಲ್ಲೂ ಹೆಚ್ರೋನ್ ಕರ್ಮೀ;


ಇಸ್ರಾಯೇಲನ ಚೊಚ್ಚಲನಾದ ರೂಬೇನನ ಮಕ್ಕಳು - ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.


ಏಹೂದನ ಸಂತಾನದವರು. (ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರಾದ ಏಹೂದನ ಸಂತಾನದವರೂ ನಾಮಾನ್,


ಬೆಳನ ಮಕ್ಕಳು - ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್, ಈರೀ ಎಂಬವರು. ಈ ಐದು ಮಂದಿಯು ಗೋತ್ರ ಪ್ರಧಾನರೂ ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಮಂದಿ.


ತೋಲನ ಮಕ್ಕಳಾದ ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್, ಸಮುವೇಲ್ ಇವರು ತೋಲವಂಶದ ಕುಟುಂಬಗಳಲ್ಲಿ ಪ್ರಧಾನಪುರುಷರೂ ರಣವೀರರೂ ಆಗಿದ್ದರು. ತೋಲವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.


ಅವರ ಗೋತ್ರಗಳ ಪ್ರಧಾನ ಪುರುಷರು - ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ. ಹೋದವ್ಯ, ಯೆಹ್ತೀಯೇಲ್. ಇವರು ರಣವೀರರೂ ಹೆಸರುಗೊಂಡವರೂ ಗೋತ್ರ ಪ್ರಧಾನರೂ ಆಗಿರುವವರು.


ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಪ್ರಧಾನರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತಗಳು ಇವೇ. ಹೀಗೆ ದೇಶ ವಿಭಾಗಕಾರ್ಯವು ಪೂರೈಸಿತು.


ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಾಧಿಪತಿಗಳೂ


ಯೊರ್ದನ್ ಹೊಳೆಯು ರೂಬೇನ್ಯರ [ಪಡುವಣ] ಮೇರೆಯಾಗಿತ್ತು. ರೂಬೇನ್ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವೇ.


ಮೋಶೆಯು ರೂಬೇನ್ಯರ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ಪ್ರದೇಶಗಳು ಯಾವವಂದರೆ -


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲ್ಯರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.


ಲೇವಿಯ ಮಕ್ಕಳಾದ ಗೇರ್ಷೋನ್ ಕೆಹಾತ್ ಮೆರಾರೀ;


ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮೂಹದವರೆಲ್ಲರನ್ನೂ ಕೂಡಿಸಿದರು. ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ಬರಸಿಕೊಂಡರು.


ಸಿಮೆಯೋನ್ ಕುಲದ ಕುಟುಂಬಗಳು ಯಾವವಂದರೆ - ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು