Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:20 - ಕನ್ನಡ ಸತ್ಯವೇದವು J.V. (BSI)

20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾನನು ನೂರಮೂವತ್ತೇಳು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನು ಮತ್ತು ಮೋಶೆಯನ್ನು ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:20
8 ತಿಳಿವುಗಳ ಹೋಲಿಕೆ  

ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಯಾರಂದರೆ ಐಗುಪ್ತದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ ಮೋಶೆಯೂ ಇವರ ಅಕ್ಕನಾದ ವಿುರ್ಯಾಮಳೂ ಹುಟ್ಟಿದರು.


ಕೆಹಾತನ ಮಕ್ಕಳು - ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ನೂರಮೂವತ್ತುಮೂರು ವರುಷ ಬದುಕಿದನು.


ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್ ಕೆಹಾತ್ ಮೆರಾರೀ ಇವರೇ. ಲೇವಿಯು ನೂರಮೂವತ್ತೇಳು ವರುಷ ಬದುಕಿದನು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ ಆರೋನರ ವಂಶದವರು.


ಲೇವಿ ಕುಲದವರ ಕುಟುಂಬಗಳು - ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ.


ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.


ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು