Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:29 - ಕನ್ನಡ ಸತ್ಯವೇದವು J.V. (BSI)

29 ನಾನು ಯೆಹೋವನು; ನಾನು ನಿನಗೆ ಹೇಳುವದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಯಲ್ಲಿ ಹೇಳಬೇಕೆಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:29
15 ತಿಳಿವುಗಳ ಹೋಲಿಕೆ  

ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲ್ಯರು ದೇಶದಿಂದ ಹೊರಟುಹೋಗುವದಕ್ಕೆ ಅಪ್ಪಣೆಕೊಡಬೇಕೆಂಬದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತಾಡಬೇಕು.


ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಗೆ ಹೋಗಿ ಅವನಿಗೆ - ಇಸ್ರಾಯೇಲ್ಯರು ನಿನ್ನ ದೇಶದಿಂದ ಹೊರಟು ಹೋಗುವಂತೆ ಅಪ್ಪಣೆಕೊಡಬೇಕೆಂದು ಹೇಳು ಅಂದನು.


ಇದಲ್ಲದೆ ದೇವರು ಮೋಶೆಯ ಸಂಗಡ ಮಾತಾಡಿ ಇಂತೆಂದನು -


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.


ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಯೆಹೋವನು ಐಗುಪ್ತ ದೇಶದಲ್ಲಿ ಮೋಶೆಯ ಸಂಗಡ ಮಾತಾಡಿದಾಗ ಆತನು ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು