ವಿಮೋಚನಕಾಂಡ 6:7 - ಕನ್ನಡ ಸತ್ಯವೇದವು J.V. (BSI)7 ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು. ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.