ವಿಮೋಚನಕಾಂಡ 6:8 - ಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |
ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.
ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.