ವಿಮೋಚನಕಾಂಡ 6:9 - ಕನ್ನಡ ಸತ್ಯವೇದವು J.V. (BSI)9 ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಿದನು. ಆದರೂ ಅವರ ಮನಸ್ಸು ಕುಗ್ಗಿ ಹೋದದರಿಂದಲೂ ಕಠಿಣವಾಗಿ ಸೇವೆಮಾಡಬೇಕಾದದರಿಂದಲೂ ಅವರು ಅವನ ಮಾತಿಗೆ ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |