Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:16 - ಕನ್ನಡ ಸತ್ಯವೇದವು J.V. (BSI)

16 ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದನಷ್ಟೆ; ಈವರೆಗೂ ನೀನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:16
18 ತಿಳಿವುಗಳ ಹೋಲಿಕೆ  

ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬದಾಗಿ ಹೇಳಿದ್ದಾನಷ್ಟೆ.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಹೀಗನ್ನಬೇಕು - ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರು ಯೆಹೂದ್ಯರು ಉಭಯರು ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.


ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇವಿುಸಿದ್ದೇನೆ, ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು; ಅವನು ನನ್ನ ಪಟ್ಟಣವನ್ನು ತಿರಿಗಿ ಕಟ್ಟಿ ಕ್ರಯವನ್ನಾಗಲಿ ಬಹುಮಾನವನ್ನಾಗಲಿ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವನು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.


ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ನೀನು ಫರೋಹನ ಬಳಿಗೆ ಹೋಗಿ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.


ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು


ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;


ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.


ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು