Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:20 - ಕನ್ನಡ ಸತ್ಯವೇದವು J.V. (BSI)

20 ಮೋಶೆ ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:20
14 ತಿಳಿವುಗಳ ಹೋಲಿಕೆ  

ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ ಮೀನುಗಳನ್ನು ಸಾಯಿಸಿದನು.


ಆತನು ಅಲ್ಲಿನ ನದಿಗಳನ್ನು ರಕ್ತವಾಗುವಂತೆಯೂ ಪ್ರವಾಹಗಳನ್ನು ಕುಡಿಯಕೂಡದಂತೆಯೂ ಮಾಡಿದನು.


ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು;


ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು.


ಅದರಲ್ಲಿದ್ದ ಮೀನುಗಳು ಸತ್ತುಹೋದವು; ನದಿಯು ಹೊಲಸು ನಾರಿದ್ದರಿಂದ ಐಗುಪ್ತ್ಯರು ಅದರಲ್ಲಿ ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಆಗಿತ್ತು.


ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?


ಯೆಹೋವನ ಆಜ್ಞೆಯಂತೆಯೇ ಮೋಶೆ ಆರೋನರು ಮಾಡಿದರು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬೀಸಾಡಿದಾಗ ಅದು ಸರ್ಪವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು