Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:5 - ಕನ್ನಡ ಸತ್ಯವೇದವು J.V. (BSI)

5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:5
20 ತಿಳಿವುಗಳ ಹೋಲಿಕೆ  

ನಾನು ಫರೋಹನಲ್ಲಿಯೂ ಅವನ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಹೊಂದಿದ ನಂತರ ನಾನು ಯೆಹೋವನು ಎಂಬದನ್ನು ಐಗುಪ್ತ್ಯರು ತಿಳುಕೊಳ್ಳುವರು ಅಂದನು.


ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು.


ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.


ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು;


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.


ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿತೀರಿಸುವೆನು; ಹೀಗೆ ಪ್ರತೀಕಾರಮಾಡಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.


ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು.


ತರುವಾಯ ಮೋಶೆಯು - ಯೆಹೋವನು ಇಸ್ರಾಯೇಲ್ಯರಿಗೋಸ್ಕರ ಫರೋಹನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ಮಾವನಿಗೆ ವಿವರಿಸಲಾಗಿ


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು.


ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು