Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:10 - ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:10
21 ತಿಳಿವುಗಳ ಹೋಲಿಕೆ  

ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.


ದೇವರೇ, ಯೆಹೋವನೇ, ನೀನೇ ದೊಡ್ಡವನು; ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.


ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಈ ಸಾರಿ ನಾನು ನನ್ನ ವಶದಲ್ಲಿರುವ ಈತಿಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಅದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳುಕೊಳ್ಳುವಿ.


ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.


ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನಮಾಡುತ್ತೀರಿ ಎಂದು ಸದಮಲ ಸ್ವಾವಿುಯು ಕೇಳುತ್ತಾನೆ.


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.


ನಮ್ಮ ಶರಣನಿಗೆ ತಮ್ಮ ಶರಣರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ತೀರ್ಮಾನಿಸುತ್ತಾರಲ್ಲಾ.


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಲ್ಪಟ್ಟಿತು.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.


ಮೋಶೆ - ಘನಚಿತ್ತಕ್ಕೆ ತೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನೇವಿುಸಬೇಕು. ಈ ಕಪ್ಪೆಗಳು ಯಾವಾಗ ನಿನ್ನ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ನಿನಗೋಸ್ಕರವೂ ನಿನ್ನ ಪ್ರಜಾಪರಿವಾರದವರಿಗೋಸ್ಕರವೂ ಬೇಡಿಕೊಳ್ಳಲಿ ಎಂದು ಫರೋಹನನ್ನು ಕೇಳಲು ಅವನು - ನಾಳೆ ಅಂದನು.


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಭೂವಿುಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು