Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:19 - ಕನ್ನಡ ಸತ್ಯವೇದವು J.V. (BSI)

19 ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:19
18 ತಿಳಿವುಗಳ ಹೋಲಿಕೆ  

ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂತಲ್ಲಾ.


ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡುವಾಗ -


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.


ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು.


ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -


ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.


ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.


ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು.


ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ಇಸ್ರಾಯೇಲ್ಯರ ಪಶುಗಳಿಗೂ ಐಗುಪ್ತ್ಯರ ಪಶುಗಳಿಗೂ ಆತನು ವ್ಯತ್ಯಾಸ ಮಾಡುವನು; ಇಸ್ರಾಯೇಲ್ಯರಿಗಿರುವ ಪಶುಗಳಲ್ಲಿ ಒಂದೂ ಸಾಯುವದಿಲ್ಲವೆಂದು ಹೇಳಬೇಕು.


ಇಸ್ರಾಯೇಲ್ಯರು ಇದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಕಲ್ಲಿನ ಮಳೆ ಬೀಳಲಿಲ್ಲ.


ಮೂರು ದಿವಸವೂ ಒಬ್ಬರಿಗೊಬ್ಬರು ಕಾಣಿಸಲಿಲ್ಲ; ಯಾವನೂ ತಾನಿರುವ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಾಯೇಲ್ಯರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕೇ ಇತ್ತು.


ಆದರೆ ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬದು ನಿಮಗೆ ತಿಳಿಯುವಂತೆ ಇಸ್ರಾಯೇಲ್ಯರಲ್ಲಿರುವ ಮನುಷ್ಯರ ಮೇಲಾಗಲಿ ಪಶುಗಳ ಮೇಲಾಗಲಿ ಒಂದು ನಾಯಿಯಾದರೂ ಬೊಗಳುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು