Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:22 - ಕನ್ನಡ ಸತ್ಯವೇದವು J.V. (BSI)

22 ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:22
19 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಪಶುಗಳಿಗೂ ಐಗುಪ್ತ್ಯರ ಪಶುಗಳಿಗೂ ಆತನು ವ್ಯತ್ಯಾಸ ಮಾಡುವನು; ಇಸ್ರಾಯೇಲ್ಯರಿಗಿರುವ ಪಶುಗಳಲ್ಲಿ ಒಂದೂ ಸಾಯುವದಿಲ್ಲವೆಂದು ಹೇಳಬೇಕು.


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಮೂರು ದಿವಸವೂ ಒಬ್ಬರಿಗೊಬ್ಬರು ಕಾಣಿಸಲಿಲ್ಲ; ಯಾವನೂ ತಾನಿರುವ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಾಯೇಲ್ಯರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕೇ ಇತ್ತು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಮಾರಣೆಯ ದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸಾಯುತ್ತಾ ಬಂದವು; ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.


ಇಸ್ರಾಯೇಲ್ಯರು ಇದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಕಲ್ಲಿನ ಮಳೆ ಬೀಳಲಿಲ್ಲ.


ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು;


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ದೇವರೇ, ನೀನು ಮೊದಲಿಂದಲೂ ನನ್ನ ಅರಸನೂ ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡಿಸಿದಾತನೂ ಆಗಿದ್ದೀಯಲ್ಲವೇ?


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.


ಅಪ್ಪಣೆಕೊಡದೆ ಹೋದರೆ ನಾನು ನಿನಗೂ ನಿನ್ನ ಪ್ರಜಾಪರಿವಾರದವರಿಗೂ ನಿನ್ನ ಮನೆಗಳಿಗೂ ವಿಷದ ಹುಳಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ ಅವರು ಇರುವ ಎಲ್ಲಾ ಭೂವಿುಯಲ್ಲಿಯೂ ಆ ಹುಳಗಳು ತುಂಬಿಕೊಳ್ಳುವವು.


ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ನಾಳೆಯೇ ಈ ಮಹತ್ಕಾರ್ಯವುಂಟಾಗುವದು ಅನ್ನಬೇಕೆಂದು ಹೇಳಿದನು.


ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು