Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:23 - ಕನ್ನಡ ಸತ್ಯವೇದವು J.V. (BSI)

23 ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ನಾಳೆಯೇ ಈ ಮಹತ್ಕಾರ್ಯವುಂಟಾಗುವದು ಅನ್ನಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ’ ಎಂದು ಹೇಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ಜನರನ್ನೂ, ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಸೂಚಕಕಾರ್ಯ ಕಾಣುವುದು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:23
6 ತಿಳಿವುಗಳ ಹೋಲಿಕೆ  

ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.


ಯೆಹೋವನು ಹಾಗೆಯೇ ಮಾಡಿದನು; ವಿಷದ ಹುಳಗಳು ಫರೋಹನ ಅರಮನೆಯಲ್ಲಿಯೂ ಅವನ ಪರಿವಾರದವರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು; ಅವುಗಳಿಂದ ದೇಶವು ಹಾಳಾಯಿತು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ಇದಲ್ಲದೆ ಯೆಹೋವನು ಕಾಲವನ್ನು ನಿರ್ಣಯಿಸಿ - ನಾಳೆಯೇ ಈ ಕಾರ್ಯವನ್ನು ನಡಿಸುವೆನು ಎಂದು ಹೇಳಿದನು.


ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.


ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು