Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:3 - ಕನ್ನಡ ಸತ್ಯವೇದವು J.V. (BSI)

3 ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯವಾಗಿ ಹುಟ್ಟುವವು; ಅವು ಹೊರಟುಬಂದು ನಿನ್ನ ಅರಮನೆಯಲ್ಲಿಯೂ ಮಲಗುವ ಕೋಣೆಯಲ್ಲಿಯೂ ಮಂಚದ ಮೇಲೆಯೂ ಬರುವದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ ನಿನ್ನ ಪ್ರಜೆಗಳ ಮೇಲೆಯೂ ಒಲೆಗಳಲ್ಲಿಯೂ ಹಿಟ್ಟುನಾದುವ ಕೊಣವಿಗೆಗಳಲ್ಲಿಯೂ ಬರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ನಿನ್ನ ಅರಮನೆಯಲ್ಲಿಯೂ ನೀನು ಮಲಗುವ ಕೊಠಡಿಯಲ್ಲಿಯೂ ನಿನ್ನ ಹಾಸಿಗೆಯ ಮೇಲೂ ನಿನ್ನ ಸೇವಕರ ಮನೆಗಳಲ್ಲಿಯೂ ನಿನ್ನ ಜನರ ಮೇಲೆಯೂ ನಿನ್ನ ಒಲೆಗಳಲ್ಲಿಯೂ ನಿನ್ನ ಹಿಟ್ಟು ನಾದುವ ಹರಿವಾಣಗಳಲ್ಲಿಯೂ ಕಾಣಿಸಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:3
8 ತಿಳಿವುಗಳ ಹೋಲಿಕೆ  

ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.


ಆದದರಿಂದ ಆ ಜನರು ತಮ್ಮ ಹಿಟ್ಟಿಗೆ ಹುಳಿಹಾಕುವದಕ್ಕಿಂತ ಮೊದಲೇ ನಾದುವ ಕೊಣವಿಗೆಗಳಲ್ಲಿ ಇದ್ದ ಕಣಕದ ಮುದ್ದೆಯನ್ನು ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.


ಅಪ್ಪಣೆಕೊಡದೆ ಹೋದರೆ ನಾನು ನಿನ್ನ ದೇಶಕ್ಕೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.


ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಪರಿವಾರದವರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ತಂದೆತಾತಂದಿರು ಹುಟ್ಟಿದಂದಿನಿಂದ ಇಂದಿನವರೆಗೂ ಅಂಥ ವಿುಡಿತೇ ದಂಡನ್ನು ಎಂದೂ ನೋಡಿಲ್ಲ ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು ಹತರಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕನಾದ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರಿಸಿದಾಗ ಆ ಜೋಯಿಸರೂ ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.


ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವವು; ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ತಿಳಿದುಕೊಳ್ಳುವಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು