ವಿಮೋಚನಕಾಂಡ 8:6 - ಕನ್ನಡ ಸತ್ಯವೇದವು J.V. (BSI)6 ಆರೋನನು ಐಗುಪ್ತದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ಮುಚ್ಚಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.
ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.