Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:10 - ಕನ್ನಡ ಸತ್ಯವೇದವು J.V. (BSI)

10 ಮೋಶೆ ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು; ಮೋಶೆಯು ಆ ಬೂದಿಯನ್ನು ಆಕಾಶಕ್ಕೆ ತೂರಲಾಗಿ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹುಣ್ಣಾಗುವ ಬೊಕ್ಕೆಗಳನ್ನೆಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಮತ್ತು ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು. ಮೋಶೆ ಆ ಬೂದಿಯನ್ನು ಆಕಾಶಕ್ಕೆ ತೂರಿದನು. ಅದು ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಮೋಶೆ ಆರೋನರು ಒಲೆಯಿಂದ ಬೂದಿಯನ್ನು ತೆಗೆದುಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡರು. ಅವರು ಬೂದಿಯನ್ನು ಗಾಳಿಯಲ್ಲಿ ತೂರಿದಾಗ ಜನರ ಮೇಲೂ ಪ್ರಾಣಿಗಳ ಮೇಲೂ ಹುಣ್ಣುಗಳಾಗತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:10
4 ತಿಳಿವುಗಳ ಹೋಲಿಕೆ  

ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಯೆಹೋವನು ಮೋಶೆ ಆರೋನರಿಗೆ - ನೀವು ಆವಿಗೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ; ಮೋಶೆ ಅದನ್ನು ಫರೋಹನ ಕಣ್ಣಿನ ಮುಂದೆ ಆಕಾಶಕ್ಕೆ ತೂರಲಿ.


ಅದು ಸಣ್ಣ ಪುಡಿಯಾಗಿ ಐಗುಪ್ತದೇಶದಲ್ಲೆಲ್ಲಾ ಹಬ್ಬಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹುಣ್ಣಾಗುವ ಬೊಕ್ಕೆಗಳನ್ನುಂಟುಮಾಡುವದು ಎಂದು ಹೇಳಿದನು.


ಆ ಹುಣ್ಣುಗಳು ಜೋಯಿಸರಲ್ಲಿಯೂ ಐಗುಪ್ತ್ಯರೆಲ್ಲರಲ್ಲಿಯೂ ಇದ್ದದರಿಂದ ಆ ಜೋಯಿಸರು ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು