Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:14 - ಕನ್ನಡ ಸತ್ಯವೇದವು J.V. (BSI)

14 ಈ ಸಾರಿ ನಾನು ನನ್ನ ವಶದಲ್ಲಿರುವ ಈತಿಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಅದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:14
27 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ - ನಿನ್ನ ಮಾತಿನ ಪ್ರಕಾರವೇ ಆಗುವದು;


ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.


ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;


ಆದಕಾರಣ, [ಯೆರೂಸಲೇಮೇ,] ನಿನಗೆ ಕ್ರೂರವಾದ ಪೆಟ್ಟುಹಾಕುವೆನು. ನಿನ್ನ ಪಾಪಗಳ ನಿವಿುತ್ತ ನಿನ್ನನ್ನು ಹಾಳುಮಾಡುವೆನು.


ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ.


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.


ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ


ದೇವರೇ, ಯೆಹೋವನೇ, ನೀನೇ ದೊಡ್ಡವನು; ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.


ಅಯ್ಯೋ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು; ಆಗ ನೀನು ಈವರೆಗೆ ಭೂವಿುಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದಿ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಲ್ಪಟ್ಟಿತು.


ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಆರೋನನು ಐಗುಪ್ತದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ಮುಚ್ಚಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು