Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:24 - ಕನ್ನಡ ಸತ್ಯವೇದವು J.V. (BSI)

24 ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:24
11 ತಿಳಿವುಗಳ ಹೋಲಿಕೆ  

ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಪರಿವಾರದವರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ತಂದೆತಾತಂದಿರು ಹುಟ್ಟಿದಂದಿನಿಂದ ಇಂದಿನವರೆಗೂ ಅಂಥ ವಿುಡಿತೇ ದಂಡನ್ನು ಎಂದೂ ನೋಡಿಲ್ಲ ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.


ಮೋಶೆಯು ತನ್ನ ಕೋಲನ್ನು ಆಕಾಶಕ್ಕೆ ಚಾಚಿದಾಗ ಯೆಹೋವನು ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಉಂಟುಮಾಡಿದನು. ಸಿಡಿಲುಗಳು ನೆಲಕ್ಕೆ ಬಿದ್ದವು. ಯೆಹೋವನು ಐಗುಪ್ತದೇಶದ ಮೇಲೆ ಕಲ್ಲಿನ ಮಳೆಯನ್ನು ಸುರಿಸಿದನು. ಕಲ್ಲಿನ ಮಳೆಯು ಬಹು ಬಲವಾಗಿತ್ತು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.


ಆ ಕಲ್ಲಿನ ಮಳೆ ಐಗುಪ್ತದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬೈಲಿನಲ್ಲಿದ್ದ ಎಲ್ಲವನ್ನೂ ನಷ್ಟಪಡಿಸಿತು. ಆ ಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಎಲ್ಲಾ ಪೈರುಗಳು ಹಾಳಾದವು. ಅಡವಿಯಲ್ಲಿದ್ದ ಮರಗಳು ಮುರಿದು ಹೋದವು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ?


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.


ಆತನು ಅವರ ದೇಶದಲ್ಲಿ ಕಲ್ಮಳೆಯನ್ನೂ ಬೆಂಕಿಯುರಿಯನ್ನೂ ಬರಮಾಡಿ


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು