ವಿಮೋಚನಕಾಂಡ 9:28 - ಕನ್ನಡ ಸತ್ಯವೇದವು J.V. (BSI)28 ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು. ಅಧ್ಯಾಯವನ್ನು ನೋಡಿ |
ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.