ವಿಮೋಚನಕಾಂಡ 9:33 - ಕನ್ನಡ ಸತ್ಯವೇದವು J.V. (BSI)33 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸಿದಾಗ ಗುಡುಗೂ ಕಲ್ಲಿನ ಮಳೆಯೂ ನಿಂತು ಹೋದವು, ಮಳೆಯು ನಿಂತಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ. ಅಧ್ಯಾಯವನ್ನು ನೋಡಿ |