Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:4 - ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಪಶುಗಳಿಗೂ ಐಗುಪ್ತ್ಯರ ಪಶುಗಳಿಗೂ ಆತನು ವ್ಯತ್ಯಾಸ ಮಾಡುವನು; ಇಸ್ರಾಯೇಲ್ಯರಿಗಿರುವ ಪಶುಗಳಲ್ಲಿ ಒಂದೂ ಸಾಯುವದಿಲ್ಲವೆಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಇಸ್ರೇಲರ ಪಶುಗಳಿಗೂ ಈಜಿಪ್ಟಿನವರ ಪಶುಗಳಿಗೂ ವ್ಯತ್ಯಾಸ ಮಾಡುವೆನು. ಇಸ್ರೇಲರ ಯಾವ ಪಶುವೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:4
10 ತಿಳಿವುಗಳ ಹೋಲಿಕೆ  

ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ಮೂರು ದಿವಸವೂ ಒಬ್ಬರಿಗೊಬ್ಬರು ಕಾಣಿಸಲಿಲ್ಲ; ಯಾವನೂ ತಾನಿರುವ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಾಯೇಲ್ಯರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕೇ ಇತ್ತು.


ಇದಲ್ಲದೆ ಯೆಹೋವನು ಕಾಲವನ್ನು ನಿರ್ಣಯಿಸಿ - ನಾಳೆಯೇ ಈ ಕಾರ್ಯವನ್ನು ನಡಿಸುವೆನು ಎಂದು ಹೇಳಿದನು.


ಮಾರಣೆಯ ದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸಾಯುತ್ತಾ ಬಂದವು; ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಇಸ್ರಾಯೇಲ್ಯರು ಇದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಕಲ್ಲಿನ ಮಳೆ ಬೀಳಲಿಲ್ಲ.


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು