Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:7 - ಕನ್ನಡ ಸತ್ಯವೇದವು J.V. (BSI)

7 ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:7
11 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವನು ಮೋಶೆಗೆ - ಫರೋಹನ ಹೃದಯವು ಮೊಂಡಾಗಿದೆ; ತಾನು ಜನರಿಗೆ ಅಪ್ಪಣೆ ಕೊಡುವದಿಲ್ಲವೆನ್ನುತ್ತಾನೆ.


ಆದರೂ ಫರೋಹನು ಆಗಲೂ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಅಪ್ಪಣೆ ಕೊಡದೆಹೋದನು.


ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಯೆಹೋವನು ಮೋಶೆ ಆರೋನರಿಗೆ - ನೀವು ಆವಿಗೆಯ ಬೂದಿಯನ್ನು ಕೈತುಂಬ ತೆಗೆದುಕೊಳ್ಳಿರಿ; ಮೋಶೆ ಅದನ್ನು ಫರೋಹನ ಕಣ್ಣಿನ ಮುಂದೆ ಆಕಾಶಕ್ಕೆ ತೂರಲಿ.


ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು