Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:2 - ಕನ್ನಡ ಸತ್ಯವೇದವು J.V. (BSI)

2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:2
14 ತಿಳಿವುಗಳ ಹೋಲಿಕೆ  

ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಪಠನವಾದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇವಿುಗೆ ಹೋಗಿ ಬಲಾತ್ಕಾರದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.


ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು.


ಗಾಳಿಯನ್ನು ನೋಡುತ್ತಲೇ ಇರುವವನು ಬೀಜ ಬಿತ್ತನು; ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರು ಕೊಯ್ಯನು .


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದೀತು ಎಂಬದು ಸೋಮಾರಿಯ ನೆವ.


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿಸಿದನು -


ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.


ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು