Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:4 - ಕನ್ನಡ ಸತ್ಯವೇದವು J.V. (BSI)

4 ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳುಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:4
25 ತಿಳಿವುಗಳ ಹೋಲಿಕೆ  

ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆಹಾ, ಸ್ವಲ್ಪ ಮಾತ್ರ ಸಿಕ್ಕಿತು; ನೀವು ಮನೆಗೆ ತೆಗೆದುಕೊಂಡು ಬಂದಾಗ ನಾನು ಅದರ ಮೇಲೆ ಉಸುರುಬಿಟ್ಟೆನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಹಾಳುಬಿದ್ದಿದೆ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತವೂ ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವದಕ್ಕೆ ಮತ್ತೆ ಆಸರೆಯಾಗುವವು.


ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ,


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿಹಾಕಿ ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ ನೆಲಸಮಗೊಳಿಸಿದ್ದಾರೆ.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಆಹಾ, ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು ಎಂದು ಹೇಳಿ ಅಗಲಗಲವಾದ ಕಿಟಕಿಗಳನ್ನಿಡಿಸಿ [ಒಳಗೆ ಗೋಡೆಗೆಲ್ಲಾ] ದೇವದಾರಿನ ಹಲಿಗೆಗಳನ್ನು ಹೊದಿಸಿ ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!


ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿಸಿದನು -


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ಐದನೆಯ ವರುಷದಲ್ಲಿ ಅದರಿಂದುಂಟಾಗುವ ಆದಾಯವು ನಿಮ್ಮದೇ ಆಗಿರುವದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.


ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?


ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು