ಹಗ್ಗಾಯ 1:6 - ಕನ್ನಡ ಸತ್ಯವೇದವು J.V. (BSI)6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.” ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.