ಹಗ್ಗಾಯ 1:8 - ಕನ್ನಡ ಸತ್ಯವೇದವು J.V. (BSI)8 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬೆಟ್ಟಗಳ ಮೇಲಕ್ಕೆ ಹೋಗಿ ಮರವನ್ನು ತಂದು ನನಗೆ ಆಲಯವನ್ನು ಕಟ್ಟಿರಿ. ಆಗ ನಾನು ನನ್ನ ನಿವಾಸದಲ್ಲಿ ಸಂತೋಷಿಸುವೆನು. ಆಗ ನಾನು ಗೌರವಿಸಲ್ಪಡುವೆನು.” ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |