Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:13 - ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುತ್ತದೋ” ಎಂದು ಕೇಳಿದನು. ಅದಕ್ಕೆ ಯಾಜಕರು: “ಖಂಡಿತವಾಗಿ ಅಶುದ್ಧವಾಗುತ್ತದೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” ಆಗ ಯಾಜಕರು, “ಹೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:13
6 ತಿಳಿವುಗಳ ಹೋಲಿಕೆ  

ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.


ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು