Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:14 - ಕನ್ನಡ ಸತ್ಯವೇದವು J.V. (BSI)

14 ಆಗ ಹಗ್ಗಾಯನು ಆ ಪ್ರಸ್ತಾಪವೆತ್ತಿ ಹೀಗಂದನು - ಯೆಹೋವನು ಇಂತೆನ್ನುತ್ತಾನೆ - ಅದರಂತೆ ಈ ಪ್ರಜೆಯು, ಅದರಂತೆ ಈ ಜನಾಂಗವು, ಅದರಂತೆ ಇವರು ಕೈ ಹಾಕುವ ಎಲ್ಲಾ ಕೆಲಸವು, ಅಲ್ಲಿ ತಂದಿಡುವ ನ್ಯೆವೇದ್ಯವು ನನಗೆ ಅಶುದ್ಧವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಹಗ್ಗಾಯನು ಮುಂದುವರಿಸುತ್ತಾ, “ಸರ್ವೇಶ್ವರ ಇಂತೆನ್ನುತ್ತಾರೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಹೊಲೆಯಾಗಿಯೇ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:14
11 ತಿಳಿವುಗಳ ಹೋಲಿಕೆ  

ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಮಲಿನವಾಗಿವೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಗರ್ವದ ದೃಷ್ಟಿ ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು