Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:18 - ಕನ್ನಡ ಸತ್ಯವೇದವು J.V. (BSI)

18 ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:18
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ಯೆಹೋವನ ಆಲಯನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;


ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು -


ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.


ಐದನೆಯ ವರುಷದಲ್ಲಿ ಅದರಿಂದುಂಟಾಗುವ ಆದಾಯವು ನಿಮ್ಮದೇ ಆಗಿರುವದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.


ಅಂದಿನಿಂದ ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದವರೆಗೂ ಯೆರೂಸಲೇವಿುನ ದೇವಾಲಯವನ್ನು ಕಟ್ಟುವ ಕೆಲಸವು ನಿಂತು ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು