Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:2 - ಕನ್ನಡ ಸತ್ಯವೇದವು J.V. (BSI)

2 ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್ ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಜನಶೇಷ, ಇವರೆಲ್ಲರಿಗೆ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಶೆಯಲ್ತಿಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ಈ ವಿಷಯಗಳನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:2
7 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು


ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.


ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು