Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:22 - ಕನ್ನಡ ಸತ್ಯವೇದವು J.V. (BSI)

22 ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:22
38 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ; ಇದು ಕರ್ತನಾದ ಯೆಹೋವನ ನುಡಿ.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ನಾನು ಎಫ್ರಾಯೀವಿುನ ರಥಬಲವನ್ನೂ ಯೆರೂಸಲೇವಿುನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಹರಡಿಕೊಂಡಿರುವದು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ಐಗುಪ್ತ್ಯರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು; ಅಣ್ಣತಮ್ಮಂದಿರು, ನೆರೆಹೊರೆಯವರು, ಪಟ್ಟಣ ಪಟ್ಟಣಗಳು, ರಾಷ್ಟ್ರ ರಾಷ್ಟ್ರಗಳು ಪರಸ್ಪರವಾಗಿ ಹೋರಾಡುವವು.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು;


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿ ಹೋಗುತ್ತಿರುವದನ್ನು ಕಂಡರು.


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದಲ್ಲಿ ಕೆಡವಿದನು; ಅವನ ಶ್ರೇಷ್ಠವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿಬಿಟ್ಟನು.


ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವದಕ್ಕೆ ಪ್ರಾರಂಭಿಸಿದರು.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು;


ಜನಾಂಗಗಳವರು ನೋಡಿ ತಮ್ಮ ಮಹಾಶಕ್ತಿಗೂ ನಾಚಿಕೆಪಡುವರು; ಬಾಯ ಮೇಲೆ ಕೈಯಿಟ್ಟುಕೊಳ್ಳುವರು, ಅವರ ಕಿವಿ ಕೇಳದಿರುವದು.


ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;


[ಯಾಕೋಬೇ,] ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ, ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.


ಯೆರೂಸಲೇವಿುನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು