Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:23 - ಕನ್ನಡ ಸತ್ಯವೇದವು J.V. (BSI)

23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಶೆಯಲ್ತೀಯೇಲನ ಮಗನೂ ನನ್ನ ಸೇವಕನೂ ಆದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವಾಗಿ ಮಾಡಿಕೊಳ್ಳುವೆನು, ಇದಕ್ಕೆ ನಿನ್ನನ್ನು ಆರಿಸಿಕೊಂಡಿದ್ದೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:23
12 ತಿಳಿವುಗಳ ಹೋಲಿಕೆ  

ಯೆಹೋವನ ಮಾತೇನಂದರೆ - ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು; ನೀವು ನನ್ನನ್ನು ತಿಳಿದು ನಂಬಿ ನನ್ನನ್ನೇ ಪರಮಾತ್ಮನು ಎಂದು ಗ್ರಹಿಸುವ ಹಾಗೆ [ಇದನ್ನು ನಡಿಸಿದೆನು]; ನನಗಿಂತ ಮುಂಚೆ ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವದಿಲ್ಲ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!


ನಿನ್ನ ಹೃದಯದ ಮೇಲೆ, ನಿನ್ನ ಕೈಯಲ್ಲಿ, ನನ್ನನ್ನು ಮುದ್ರೆಯನ್ನಾಗಿ ಧರಿಸಿಕೋ. ಪ್ರೀತಿಯು ಮರಣದಷ್ಟು ಬಲವಾಗಿದೆ, [ಪ್ರೀತಿದ್ರೋಹದಿಂದ ಹುಟ್ಟುವ] ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಅದು ಯೆಹೋವನ ರೋಷಾಗ್ನಿಯು.


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು