Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:3 - ಕನ್ನಡ ಸತ್ಯವೇದವು J.V. (BSI)

3 ಈ ಆಲಯದ ಪೂರ್ವವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಾಗಿ ಕಾಣಿಸುತ್ತದಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:3
8 ತಿಳಿವುಗಳ ಹೋಲಿಕೆ  

ಆದರೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಗೋತ್ರ ಪ್ರಧಾನರಲ್ಲಿಯೂ ಅನೇಕರು ಅಂದರೆ ಮುಂಚಿನ ದೇವಾಲಯವನ್ನು ನೋಡಿದ್ದ ಮುದುಕರು ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಡುವದನ್ನು ನೋಡುವಾಗ ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.


ಅವರ ಆಭರಣಗಳ ಚಂದವು ಅವರಿಗೆ ಗರ್ವಾಸ್ಪದವಾಯಿತು; ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.


ದಾವೀದನು [ತನ್ನ ಮನಸ್ಸಿನಲ್ಲಿ] - ನನ್ನ ಮಗನಾದ ಸೊಲೊಮೋನನು ಎಳೇ ಪ್ರಾಯದವನಾಗಿದ್ದಾನೆ; ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯವು ಎಲ್ಲಾ ದೇಶಗಳಲ್ಲಿ ಕೀರ್ತಿ ಘನಗಳನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾದದ್ದಾಗಿರಬೇಕು; ಆದದರಿಂದ ಅದಕ್ಕೆ ಬೇಕಾಗುವದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವದಕ್ಕೆ ಮೊದಲೇ ಬಹಳವಾಗಿ ಸೌರಣೆಮಾಡಿದನು.


ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು