ಹಗ್ಗಾಯ 2:4 - ಕನ್ನಡ ಸತ್ಯವೇದವು J.V. (BSI)4 ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |