ಹಗ್ಗಾಯ 2:9 - ಕನ್ನಡ ಸತ್ಯವೇದವು J.V. (BSI)9 ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |