ಹಬಕ್ಕೂಕ 1:16 - ಕನ್ನಡ ಸತ್ಯವೇದವು J.V. (BSI)16 ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;