Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:4 - ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:4
46 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.


ದುಷ್ಟರು ಬಾಳಿ ವೃದ್ಧರಾಗುವದಕ್ಕೂ ಇದಲ್ಲದೆ ಪ್ರಬಲಿಸುವದಕ್ಕೂ ಕಾರಣವೇನು?


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಶಿಷ್ಟಹಿಂಸಕರೇ, ಲಂಚಕೋರರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ, ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ಪ್ರಬಲ, ನನಗೆ ಗೊತ್ತಿದೆ.


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ!


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಆತನು ಇನ್ನೂ ಅವರಿಗೆ - ನೀವು ನಿಮ್ಮ ಸಂಪ್ರದಾಯವನ್ನು ಹಿಡಿದು ನಡಿಸುವದಕ್ಕಾಗಿ ದೇವರ ಆಜ್ಞೆಯನ್ನು ವ್ಯರ್ಥಮಾಡುತ್ತೀರಿ; ಬಹು ಚೆನ್ನಾಗಿದೆಯಲ್ಲವೇ.


ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?


ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಓಡಿಬಂದು ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯ ಮಾಡು.


ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು ನಿನಗೆ ಮರಣವೇ ಆಗಬೇಕು;


ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ. ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು ಎಂದು ನನಗೆ ಹೇಳುವದೇಕೆ?


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು