Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:6 - ಕನ್ನಡ ಸತ್ಯವೇದವು J.V. (BSI)

6 ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:6
24 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.


ಇದರ ನಿವಿುತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಹಲುಬಿ ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬೆಲಿಗೆ ಒಯ್ಯುವದಕ್ಕೋಸ್ಕರ


ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


[ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು.


ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.


ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.


ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ಅದರ ಮುಂಗಡೆ ಬೆಂಕಿಯು ನುಂಗಿಕೊಂಡು ಬರುತ್ತದೆ, ಹಿಂಗಡೆ ಜ್ವಾಲೆಯು ಧಗಧಗಿಸುತ್ತದೆ; ಅದು ಬರುವದಕ್ಕೆ ಮುಂಚೆ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ದಾಟಿಹೋದ ಮೇಲೆ ಬೆಗ್ಗಾಡಾಗಿದೆ; ಅದಕ್ಕೆ ಯಾವದೂ ತಪ್ಪಿಸಿಕೊಳ್ಳಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು